ಸುದ್ದಿ

ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ

Share It

ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

   ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ  ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ  ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ  ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರೆದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ PoS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ. 

ಡಿಜಿಟಲ್‌ ಸೇವೆ
ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.
ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.

ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Leave a Reply

Your email address will not be published. Required fields are marked *