
ವಿಶ್ವಮಾನವ ಮಹಾ ಮಾನವತವಾದಿ ಭಾರತ ರತ್ನ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ: ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಂದ, ದಿನಾಂಕ:05-07-2026 ರಂದು ಸಮಯ 11:00 ಸ್ಥಳ :ಜಿಲ್ಲಾಡಳಿತ ಭವನ, ಬೀರಸಂದ್ರ,ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಉದ್ಘಾಟನೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು. ಈ ಒಂದು ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ರವರು ಹಾಗೂ ಹಲವಾರು ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಹಾಗೂ ಎಲ್ಲಾ ದಲಿತಪರ ,ಕನ್ನಡಪರ ಸಂಘಟನೆಗಳು ಮತ್ತು ಪತ್ರಿಕಾ ಹಾಗೂ ಮಾಧ್ಯಮ ರವರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿರುವ ಈ ಒಂದು ಕಾರ್ಯಕ್ರಮಕ್ಕೆ ಬೃಹತ್ ಮಟ್ಟದಲ್ಲಿ ವೇದಿಕೆ ನಿರ್ಮಾಣವಾಗಿದೆ ಸ್ಥಳ : ಕುಂದಾಣ ಮೈದಾನ ವಿಶ್ವನಾಥಪುರ ಪೊಲೀಸ್ ಠಾಣೆ ಹಿಂಭಾಗ.

